JobsNational

Good News ; ‘SSC’ಯಲ್ಲಿ 2,536 ಹುದ್ದೆಗಳ ಭರ್ತಿಗೆ ನೇಮಕಾತಿ ; ಕನ್ನಡದಲ್ಲೇ ಪರೀಕ್ಷೆ, 63,200 ರೂ. ಸಂಬಳ!

ಕ್ರಿಯೇಟರ್ ಕನ್ನಡ ಡಿಜಿಟಲ್ ಡೆಸ್ಕ್; ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ 2,536 ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC) ದೇಶದ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವ ಲೋವರ್‌ ಡಿವಿಷನ್‌ ಕ್ಲರ್ಕ್‌ (LDC), ಜೂನಿಯರ್‌ ಸೆಕ್ರಟರಿಯೇಟ್‌ ಅಸಿಸ್ಟಂಟ್‌ (JSA) ಮತ್ತು ಡೇಟಾ ಎಂಟ್ರಿ ಆಪರೇಟರ್‌ (DEO) ಸೇರಿ ಒಟ್ಟು 2,536 ಗ್ರೂಪ್ ‘ಸಿ’ ಹುದ್ದೆಗಳ ಭರ್ತಿ ಮಾಡಲಿದೆ. ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂದ್ಹಾಗೆ, ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 7, 2026 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ ; ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ / 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ; ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಆಗಿರಬೇಕು. ಇನ್ನು ಗರಿಷ್ಠ ವಯಸ್ಸು 27 ವರ್ಷ ಆಗಿದೆ.ವೇತನ.!LDC / JSA ಹುದ್ದೆಗಳು ; 19,900 – 63,200/- (ಪೇ-ಲೆವೆಲ್ 2)DEO

ಹುದ್ದೆಗಳು ; 25,500 – 92,300/- (ಪೇ-ಲೆವೆಲ್ 4 ಮತ್ತು 5)ಅರ್ಜಿ ಶುಲ್ಕ ; ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ 100 ರೂಪಾಯಿ ಮತ್ತು ಮಹಿಳಾ ಅಭ್ಯರ್ಥಿಗಳು, ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು.!

ಅರ್ಜಿ ಸಲ್ಲಿಕೆ ಪ್ರಾರಂಭ : : ಸೆಪ್ಟೆಂಬರ್ 07, 2026ಅರ್ಜಿ ಸಲ್ಲಿಕೆ

ಕೊನೆಯ ದಿನಾಂಕ : ಅಕ್ಟೋಬರ್ 07, 2026

ಅರ್ಜಿ ತಿದ್ದುಪಡಿ : ಅಕ್ಟೋಬರ್ 14 ರಿಂದ 16, 2026ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Leave a Reply

Your email address will not be published. Required fields are marked *