JobsState

Good News : ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ; 5,431 ‘FDA ಹಾಗೂ SDA’ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ನ.30ರವರೆಗೆ ಅವಕಾಶ!

Spread the love

ಬೆಂಗಳೂರು : ಸರ್ಕಾರಿ ಉದ್ಯೋಗಕ್ಕಾಗಿ ಶ್ರಮಿಸುತ್ತಿರುವ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಸುದ್ದಿಯನ್ನು ನೀಡಿದೆ. ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ 5,431 ಪ್ರಥಮ ದರ್ಜೆ ಸಹಾಯಕ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿ ಪ್ರಾಧಿಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಹಿಂದೆ ಪ್ರಕಟಿಸಿದ್ದ ಅಧಿಸೂಚನೆಯ ಪ್ರಕಾರ, ಅಕ್ಟೋಬರ್ 30 ರಿಂದ ಆರಂಭವಾಗಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಇಂದು ಅಂದರೆ ನವೆಂಬರ್ 25 ಕೊನೆಯ ದಿನವಾಗಿತ್ತು. ಆದರೆ ಸರ್ವರ್ ದಟ್ಟಣೆ ಹಾಗೂ ಅಭ್ಯರ್ಥಿಗಳ ನಿರಂತರ ಮನವಿಯ ಮೇರೆಗೆ, ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ದಿನಾಂಕವನ್ನು ನವೆಂಬರ್ 30, 2026 ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ ನೀಡಿದೆ.

ನೇಮಕಾತಿ ಹುದ್ದೆಗಳು ಮತ್ತು ಶೈಕ್ಷಣಿಕ ಅರ್ಹತೆಯ ವಿವರ!
ಈ ಬೃಹತ್ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ (KK) ಮತ್ತು ಉಳಿಕೆ ಮೂಲ ವೃಂದದ (RPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

• ಪ್ರಥಮ ದರ್ಜೆ ಸಹಾಯಕ (FDA): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Bachelor’s Degree) ಉತ್ತೀರ್ಣರಾಗಿರಬೇಕು.

• ದ್ವಿತೀಯ ದರ್ಜೆ ಸಹಾಯಕ (SDA):
ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ (12th Pass) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳಂತೆ ವಯೋಮಿತಿ ಸಡಿಲಿಕೆ ಇರಲಿದೆ. ಅಧಿಸೂಚನೆ ಓದಿ ನಂತ್ರ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು ಮತ್ತು ಪರೀಕ್ಷಾ ವೇಳಾಪಟ್ಟಿ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೇಳಾಪಟ್ಟಿಯಂತೆ ಮುಂದಿನ ಹಂತಗಳ ವಿವರ ಇಲ್ಲಿದೆ.
ಅರ್ಜಿ ಸಲ್ಲಿಸಲು ವಿಸ್ತರಿತ ಕೊನೆಯ ದಿನಾಂಕ
: ನವೆಂಬರ್ 30, 2026
ಕನ್ನಡ ಭಾಷಾ ಪರೀಕ್ಷೆ : ಜನವರಿ 8, 2027
ಪದವಿ ಮಟ್ಟದ (FDA) ಸ್ಪರ್ಧಾತ್ಮಕ ಪರೀಕ್ಷೆ : ಜನವರಿ 9 ಮತ್ತು 10, 2027
ಪಿಯುಸಿ ಮಟ್ಟದ (SDA) ಸ್ಪರ್ಧಾತ್ಮಕ ಪರೀಕ್ಷೆ : ಜನವರಿ 16 ಮತ್ತು 17, 2027

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ಕ್ಷಣದ ಸರ್ವರ್ ತೊಂದರೆ ತಪ್ಪಿಸಲು ಕೂಡಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/kearpcrec2026 ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಗಮನಿಸಬೇಕಾದ ಅಂಶಗಳು! ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅಂಕಪಟ್ಟಿಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳ ಮೂಲ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಅರ್ಜಿ ಸಲ್ಲಿಸಿದ ನಂತರ ನಿಗದಿತ ಶುಲ್ಕವನ್ನು ಪಾವತಿಸಿ, ಅಂತಿಮ ಅರ್ಜಿಯ ಪ್ರತಿಯನ್ನು (Application Printout) ಡೌನ್‌ಲೋಡ್ ಮಾಡಿ ಭವಿಷ್ಯದ ದಾಖಲಾತಿ ಪರಿಶೀಲನೆಗಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

Leave a Reply

Your email address will not be published. Required fields are marked *