NationalJobs

Good News ; ‘SSC’ಯಲ್ಲಿ 2,536 ಹುದ್ದೆಗಳ ಭರ್ತಿಗೆ ನೇಮಕಾತಿ ; ಕನ್ನಡದಲ್ಲೇ ಪರೀಕ್ಷೆ, 63,200 ರೂ. ಸಂಬಳ!

Spread the love

ಕ್ರಿಯೇಟರ್ ಕನ್ನಡ ಡಿಜಿಟಲ್ ಡೆಸ್ಕ್; ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ 2,536 ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC) ದೇಶದ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವ ಲೋವರ್‌ ಡಿವಿಷನ್‌ ಕ್ಲರ್ಕ್‌ (LDC), ಜೂನಿಯರ್‌ ಸೆಕ್ರಟರಿಯೇಟ್‌ ಅಸಿಸ್ಟಂಟ್‌ (JSA) ಮತ್ತು ಡೇಟಾ ಎಂಟ್ರಿ ಆಪರೇಟರ್‌ (DEO) ಸೇರಿ ಒಟ್ಟು 2,536 ಗ್ರೂಪ್ ‘ಸಿ’ ಹುದ್ದೆಗಳ ಭರ್ತಿ ಮಾಡಲಿದೆ. ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂದ್ಹಾಗೆ, ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 7, 2026 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ ; ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ / 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ; ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಆಗಿರಬೇಕು. ಇನ್ನು ಗರಿಷ್ಠ ವಯಸ್ಸು 27 ವರ್ಷ ಆಗಿದೆ.ವೇತನ.!LDC / JSA ಹುದ್ದೆಗಳು ; 19,900 – 63,200/- (ಪೇ-ಲೆವೆಲ್ 2)DEO

ಹುದ್ದೆಗಳು ; 25,500 – 92,300/- (ಪೇ-ಲೆವೆಲ್ 4 ಮತ್ತು 5)ಅರ್ಜಿ ಶುಲ್ಕ ; ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ 100 ರೂಪಾಯಿ ಮತ್ತು ಮಹಿಳಾ ಅಭ್ಯರ್ಥಿಗಳು, ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು.!

ಅರ್ಜಿ ಸಲ್ಲಿಕೆ ಪ್ರಾರಂಭ : : ಸೆಪ್ಟೆಂಬರ್ 07, 2026ಅರ್ಜಿ ಸಲ್ಲಿಕೆ

ಕೊನೆಯ ದಿನಾಂಕ : ಅಕ್ಟೋಬರ್ 07, 2026

ಅರ್ಜಿ ತಿದ್ದುಪಡಿ : ಅಕ್ಟೋಬರ್ 14 ರಿಂದ 16, 2026ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC CHSL) ಈ ಹುದ್ದೆಗಳಿಗೆ ಎರಡು ಹಂತಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier-1 ಮತ್ತು Tier-2) ಹಾಗೂ ಟೈಪಿಂಗ್ ಅಥವಾ ಕೌಶಲ್ಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಸಾಮಾನ್ಯ ಬುದ್ಧಿಮತ್ತೆ (Reasoning), ಸಾಮಾನ್ಯ ಜ್ಞಾನ, ಗಣಿತ ಮತ್ತು ಇಂಗ್ಲಿಷ್ ಭಾಷೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಪರೀಕ್ಷೆಯಲ್ಲಿ ಕೇಳಲಾಗುತ್ತದೆ.

ಕನ್ನಡದಲ್ಲೇ ಪರೀಕ್ಷೆ ಬರೆಯುವ ಸುವರ್ಣಾವಕಾಶ : ಕೇಂದ್ರ ಸರ್ಕಾರವು ಈ ಬಾರಿ ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲೇ Tier-1 ಮತ್ತು Tier-2 ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಿರುವುದು ಕರ್ನಾಟಕದ ಅಭ್ಯರ್ಥಿಗಳಿಗೆ ದೊಡ್ಡ ವರದಾನವಾಗಿದೆ. ಇದರಿಂದ ಇಂಗ್ಲಿಷ್ ಅಥವಾ ಹಿಂದಿ ಭಾಷೆಯ ತೊಡಕಿಲ್ಲದೆ ಗ್ರಾಮೀಣ ಭಾಗದ ಅಭ್ಯರ್ಥಿಗಳು ಸಹ ಸುಲಭವಾಗಿ ಪರೀಕ್ಷೆ ಎದುರಿಸಬಹುದಾಗಿದೆ.

ಪರೀಕ್ಷೆಗೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ಸೂಚನೆ : ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರ (Admit Card) ಮತ್ತು ಪರೀಕ್ಷಾ ದಿನಾಂಕದ ನಿಖರ ಮಾಹಿತಿಗಾಗಿ ಕಾಲಕಾಲಕ್ಕೆ SSC ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡಿ ಪರಿಶೀಲಿಸುತ್ತಿರಬೇಕು.

ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕಾದ ದಾಖಲೆಗಳು : ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರದ (Admit Card) ಪ್ರಿಂಟ್ ಪ್ರತಿ, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಅಥವಾ ವೋಟರ್ ಐಡಿಯಂತಹ ಯಾವುದಾದರೂ ಒಂದು ಮೂಲ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕು.

Leave a Reply

Your email address will not be published. Required fields are marked *